ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಶರಣಾಗುವಂತೆ ಹೇಳಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಕೊಡಗು, ದ.ಕ, ಉಡುಪಿಯ ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಲು ಬಂದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಪ್ರಸ್ತುತ ಸಂಪತ್ ರಾಜ್ ತಲೆ ಮರೆಸಿಕೊಂಡಿದ್ದು, ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇದಕ್ಕೆ ಉತ್ತರ ಕೊಡಬೇಕು. ಸಂಪತ್ ರಾಜನ ಪೊಲೀಸರಿಗೆ ಕೈ ಪೊಲೀಸರ ಕೈಗೆ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡಬೇಕು. ಅಖಂಡ ಶ್ರೀನಿವಾಸ ಮೂರ್ತಿಯನ್ನು ಬಿಜೆಪಿ ಬೆಂಬಲಿಸುತ್ತದೆ ಮತ್ತು ಅಖಂಡ ಶ್ರೀನಿವಾಸಮೂರ್ತಿ ಗೆ ಭಾರತೀಯ ಜನತಾ ಪಾರ್ಟಿ ನ್ಯಾಯ ಕೊಡಿಸುವ ಕೆಲಸ ಮಾಡಲಿದೆ ಎಂದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸೋಲಿನ ವಿಚಾರದಲ್ಲಿ ಪ್ರತಿಕ್ರಿಯಿಸಿದ ನಳಿನ್ ಎರಡು ಕ್ಷೇತ್ರದ ಸೋಲಿಗೆ ಡಿಕೆಶಿ- ಸಿದ್ದರಾಮಯ್ಯ ಕಾರಣ ವಾಗಿದ್ದು ಆರ್ ಆರ್ ನಗರವನ್ನು ಸೋಲಿಸಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಿರಾ ಕ್ಷೇತ್ರವನ್ನು ಸೋಲಿಸಿದ್ದು ಡಿಕೆ ಶಿವಕುಮಾರ್ ಎನ್ನುವುದು ಕಾರ್ಯಕರ್ತರಿಗೆ ಗೊತ್ತಾಗಿ ಈಗ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾತನಾಡಿದ ಅವರು ಈ ಬಗ್ಗೆಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳ ತೀರ್ಮಾನದ ನಂತರ ಪಕ್ಷದೊಳಗೆ ಚರ್ಚೆಯಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಡಿಯೂರಪ್ಪನವರು ಅನುಭವಿಗಳು ರಾಜ್ಯದ ಹಿತದೃಷ್ಟಿಯಿಂದ ಸಂಪುಟ ವಿಸ್ತರಣೆ ಮಾಡುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನನಗಿಂತ ಹಿರಿಯರಾಗಿದ್ದು, ಅವರಿಗೆ ಸಲಹೆ ಕೊಡುವ ಶಕ್ತಿ ನನಗಿಲ್ಲ ಎಂದರು
ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಮತ ವಿಚಾರದಲ್ಲಿ ಪ್ರತಿಕ್ರಿಯಿಸಿ ರಾಜ್ಯದಲ್ಲಿ ಪಕ್ಷ ಮತ್ತು ಸರಕಾರ ಚೆನ್ನಾಗಿ ನಡೆಯುತ್ತಿದೆ. ಪಕ್ಷದ ಸೀಮಿತತೆ ಮತ್ತು ನಿಯಮವನ್ನು ಮೀರಿ ಯಾರು ವರ್ತಿಸಬಾರದು ಎಲ್ಲವನ್ನೂ ಪಕ್ಷದ ನಿಯಮಗಳ ಅಡಿಯಲ್ಲೇ ಎಲ್ಲರೂ ಮಾತನಾಡಬೇಕು. ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಂಡಿದ್ದೇವೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ಏನು ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.










