ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…

159
firstsuddi

ಚಾಮರಾಜನಗರ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಧನಗೆರೆ-ಸತ್ತೆಗಾಲ ಗ್ರಾಮದ ಬಳಿ ನಡೆದಿದೆ. ಮೃತರನ್ನು ಹನೂರು ತಾಲ್ಲೂಕಿನ ಪಾಡಿಮೇಡು ಗ್ರಾಮದ ನಿವಾಸಿಗಳಾದ ಶೇಷುರಾಜ್, ಸೇತು ಹಾಗೂ ಡೇವಿಡ್ ಎಂದು ಗುರುತಿಸಲಾಗಿದೆ. ಮೃತರು ಬೈಕ್‍ನಲ್ಲಿ ಕೊಳ್ಳೇಗಾಲದಿಂದ ಮಳವಳ್ಳಿ ಮಳವಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಮಳವಳ್ಳಿಯಿಂದ ಕೊಳ್ಳೇಗಾಲದ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು, ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.