50 ಅಡಿ ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್ : ಐವರು ಸಾವು…

137
firstsuddi

ಸತಾರಾ : ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ 50 ಅಡಿ ಕಂದಕಕ್ಕೆ ಉರುಳಿ ಬಿದ್ದು ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕರಾದ್ ಪಟ್ಟಣದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಮುಂಬೈಯಿಂದ ಗೋವಾದ ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿ ಸೇತುವೆಗೆ ಡಿಕ್ಕಿ ಹೊಡೆದು 50 ಅಡಿ ಕೆಳಗೆ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಪುರುಷರು ಮಹಿಳೆ ಹಾಗೂ ಮೂರು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.