ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಸಿಎಂ ಬಿಎಸ್‍ವೈ ಆದೇಶ…

119
firstsuddi

ಬೆಂಗಳೂರು : ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಅವರಲ್ಲಿ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ಸ್ಥಾಪಿಸಲು ತಕ್ಷಣಕ್ಕೆ ಜಾರಿಗೆ ಬರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಂಡು ಸರ್ಕಾರಿ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.