ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು…

139
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಮ್ಮು ಕಾಶ್ಮೀರಾದ ನಾಗ್ರೋಟಾದ ಬಳಿಯ ಬಾನ್ ಟೋಲ್ ಪ್ಲಾಜಾ ಬಳಿ ಉಗ್ರರು ಅಡಗಿರುವ ಮಾಹಿತಿಯನ್ನು ತಿಳಿದ ಭದ್ರತಾ ಪಡೆಗಳು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಉಗ್ರರ ಗುಂಪೊಂದು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡಿನ ದಾಳಿ ನಡೆಸಿ ಅರಣ್ಯ ಪ್ರದೇಶದತ್ತ ತಪ್ಪಿಸಿಕೊಂಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ದಾಳಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.