ದೇಶದಲ್ಲಿ ಒಂದೇ ದಿನ 45,576 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 89,58,484ಕ್ಕೆ ಏರಿಕೆ…

161
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 45,576 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 89,58,484ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಕೂಡಾ ಕಡಿಮೆಯಾಗಿದ್ದು, ನಿನ್ನೆ ಒಂದೇ ದಿನ 585 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,31,578ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 89,58,484 ಮಂದಿ ಸೋಂಕಿತರ ಪೈಕಿ ಈವರೆಗೆ 83,83,603 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,43,303 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.