ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು…

161
firstsuddi

ಬೆಂಗಳೂರು : ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ. ಮೃತ ಕಾರು ಚಾಲಕನನ್ನು ಸುನೀಲ್(28) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂದೆ ವೇಗವಾಗಿ ಬರುತ್ತಿದ್ದ ಓಮ್ನಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಹಿಂದೆ ವೇಗವಾಗಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಗಾಡಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಈ ಕುರಿತು ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯನ್ನು ಪ್ರಕರಣ ದಾಖಲಾಗಿದೆ.