ಶ್ರೀನಗರ : ಗಡಿಯಲ್ಲಿ ಪಾಕ್ ಸೈನಿಕರು ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರಾದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೈನಿಕರು ಇಂದು ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದು, ಭಾರತೀಯ ಯೋಧರು ಕೂಡಾ ಪ್ರತಿದಾಳಿ ನಡೆಸುತ್ತಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










