ನವದೆಹಲಿ : ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮುಖ್ಯಮಂತ್ರಿಗಳೊಂದಿಗೆ ಈಗಿನ ಪರಿಸ್ಥಿತಿ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ. ಕೇರಳ, ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ, ದೆಹಲಿ, ಛತ್ತೀಸ್‍ಗಢ, ಪಶ್ಚಿಮ ಬಂಗಾಳ ಹಾಗೂ ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.










