ಅಂಬರೀಷ್ ಅವರ 2ನೇ ವರ್ಷದ ಪುಣ್ಯಸ್ಮರಣೆ-ಕುಟುಂಬಸ್ಥರಿಂದ ಸಮಾಧಿಗೆ ಪೂಜೆ…

122
firstsuddi

ಬೆಂಗಳೂರು : ಇಂದು ಸ್ಯಾಂಡಲ್‍ವುಡ್ ನ ಹಿರಿಯ ನಟ ಹಾಗೂ ಕೇಂದ್ರದ ಮಾಜಿ ಸಚಿವ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಅಂಬರೀಷ್ ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದರು. ಸಂಸದೆ ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್ ಅಂಬರೀಷ್, ನಟ ದರ್ಶನ್, ರಾಕ್‍ಲೈನ್ ವೆಂಕಟೇಶ್ ಅವರು ಸೇರಿದಂತೆ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಷ್ ಅವರ ಸಮಾದಿ ಬಳಿ ಅಂಬರೀಷ್ ಅವರಿಗೆ ಇಷ್ಟವಾದ ಖಾದ್ಯಗಳನ್ನು ಇಟ್ಟು ಪೂಜೆ ಸಲ್ಲಿಸಿದರು.