ಮೂಡಿಗೆರೆ : ಅತ್ತಿಗೆರೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ…

213
firstsuddi

ಕೊಟ್ಟಿಗೆಹಾರ : ತರುವೆ ಗ್ರಾ.ಪಂ ವ್ಯಾಪ್ತಿಯ ಅತ್ತಿಗೆರೆ ಗದ್ದೆ ಬಯಲಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಆರೀಫ್ ಅವರು ಹಿಡಿದು ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟರು.
ಅತ್ತಿಗೆರೆಯ ಸಮೀಪ ಹೆದ್ದಾರಿಗೆ ಹೊಂದಿಕೊಂಡಿರುವ ಗದ್ದೆ ಬಯಲಿನಲ್ಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗಸರ್ಪ ಕಾಣಿಸಿಕೊಂಡು ಗಾಬರಿಗೊಂಡ ಸ್ಥಳೀಯರು ಉರಗಪ್ರೇಮಿ ಆರೀಫ್ ಅವರಿಗೆ ವಿಷಯ ಮುಟ್ಟಿಸಿದ್ದು, ಆರೀಫ್ ಅವರು ಕಾಳಿಂಗ ಸರ್ಪವನ್ನು ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟರು