ಮುಂದಿನ ಎರಡೂವರೆ ವರ್ಷ ಬಿ.ಎಸ್ ಯಡಿಯೂರಪ್ಪರವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ-ನಳಿನ್ ಕುಮಾರ್ ಕಟೀಲ್.

136
firstsuddi

ದಾವಣಗೆರೆ : ರಾಜ್ಯದಲ್ಲಿ ಮುಂದಿನ ಎರಡೂವರೆ ವರ್ಷ ಬಿ.ಎಸ್ ಯಡಿಯೂರಪ್ಪರವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ, ನಾವು ಹಾಗೂ ಮುಖ್ಯಮಂತ್ರಿಗಳು ಕೇಂದ್ರದ ನಾಯಕರೊಂದಿಗೆ ಮಾತುಕತೆ ನಡೆಸಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾವೆಲ್ಲರೂ ಕೇಂದ್ರದ ಅಣತಿಯಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನಾವು ಸಹಜವಾಗಿಯೇ ಮುಖ್ಯಮಂತ್ರಿಗಳನ್ನು ಆಗಾಗ್ಗ ಬೇಟಿ ಮಾಡುತ್ತಿರುತ್ತೇವೆ. ಅದರಲ್ಲಿ ತಪ್ಪು ಪರಿಕಲ್ಪನೆ ಬೇಡ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇನ್ನು ಮುಂದಿನ ಎರಡೂವರೆ ವರ್ಷ ಬಿ.ಎಸ್ ಯಡಿಯೂರಪ್ಪರವರೆ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.