ಮೂಡಬಿದರೆ : ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರುಪಾಲು…

120
firstsuddi

ಮೂಡಬಿದರೆ : ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಮೂಡಬಿದರೆ ಸಮೀಪದ ತುಲೆಮುಗೇರ್ ಎಂಬಲ್ಲಿ ನಡೆದಿದೆ. ನಿಖಿಲ್ (18) ,ಹರ್ಷಿತಾ (20), ಸುಭಾಷ್ (19) ಹಾಗೂ ರವಿ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತರು ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ಬಂದಿದ್ದು, ನಿನ್ನೆ ಸಂಜೆ ಕಡಂದಲೆಯ ಶಾಂಭವಿ ನದಿಯಲ್ಲಿ ಈಜಲು ತೆರಳಿದ್ದು, ಈ ವೇಳೆ ಮೂವರು ಯುವಕರು ಹಾಗೂ ಓರ್ವ ಯುವತಿ ನೀರುಪಾಲಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಸ್ಥಳೀಯರ ಸಹಾಯದೊಂದಿಗೆ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮೂಡಬಿದರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.