ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 44,376 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 92,22,217ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 481 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,34,699ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 92,22,217 ಮಂದಿ ಸೋಂಕಿತರ ಪೈಕಿ ಈವರೆಗೆ 86,42,771 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,44,746 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










