ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಮುಖ್ಯಮಂತ್ರಿಗಳ ಭದ್ರತೆಗೆ ತೆರಳುತ್ತಿದ್ದ ಪೊಲೀಸರಿದ್ದ ವಾಹನ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಆನೆ ತಲೆದಿಂಬದಲ್ಲಿ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಲೆಮಹಾದೇಶ್ವರ ಬೆಟ್ಟಕ್ಕೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಈ ಹಿನ್ನೆಲೆ ಭದ್ರತೆಗಾಗಿ ಪೊಲೀಸರನ್ನು ಕರೆದುಕೊಂಡು ಹೋಗುತ್ತಿದ್ದ ಶಿಕ್ಷಣ ಇಲಾಖೆಯ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಗಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ವಾಹನ ಚಾಲಕ ಗುರುಕಿರಣ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.










