ಮಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ…

134
firstsuddi

ಮಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕ್ರುದ್ರೋಳಿ ಕರ್ನಲ್ ಗಾರ್ಡನ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬೊಕ್ಕಪಟ್ಟ ನಿವಾಸಿ ಇಂದ್ರಜಿತ್(45) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಕರ್ನಲ್ ಸರ್ಕಲ್ ಬಳಿ ಮೃತದೇಹ ಪತ್ತೆಯಾಗಿದ್ದು, ದುಷ್ಕರ್ಮಿಗಳು ನಿನ್ನೆ ರಾತ್ರಿ ಕೊಲೆ ಮಾಡಿ ಮೃತದೇಹವನ್ನು ಆ ಪ್ರದೇಶದಲ್ಲಿ ಹಾಕಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.