ಜಮ್ಮು-ಕಾಶ್ಮೀರ : ಗಡಿಯಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರಾದ ಶ್ರೀನಗರದ ಬಳಿ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಸಿ.ಆರ್.ಪಿ.ಎಫ್ ಯೋಧರು ಹುತಾತ್ಮರಾಗಿದ್ದು, ಇನ್ನೂ ಕೆಲ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಸಮೀಪದ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಭಾರತೀಯ ಯೋಧರು ಫೈರಿಂಗ್ ನಡೆದ ಪ್ರದೇಶವನ್ನು ಸುತ್ತುವರೆದು ತಪ್ಪಿಸಿಕೊಂಡಿರುವ ಉಗ್ರರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.










