ಚಿಕ್ಕಮಗಳೂರು : ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ಶೋಷಿತ ಸಮುದಾಯ ಇಂದು ನೆಮ್ಮದಿಯಿಂದ ಬದುಕುವಂತಾಗಿದೆ : ಕೆ.ಟಿ.ರಾಧಾಕೃಷ್ಣ.

160
firstsuddi

ಚಿಕ್ಕಮಗಳೂರು : ನಗರದ ಬಹುಜನ ಸಮಾಜ ಪಕ್ಷದ ಕಛೇರಿಯಲ್ಲಿ ಇಂದು ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ಶೋಷಿತ ಸಮುದಾಯ ಇಂದು ನೆಮ್ಮದಿಯಿಂದ ಬದುಕುವಂತಾಗಿದೆ ಎಂದರು.
ಇಡೀ ಜಗತ್ತೇ ಗೌರವಿಸುವ ಅಂಬೇಡ್ಕರ್ ಅವರ ಸಂವಿಧಾನವನ್ನು ತಿರುಚುವುದು ಮತ್ತು ತಿದ್ದುಪಡಿ ಮಾಡುವುದನ್ನು ಕೈಬಿಟ್ಟು ಯಥಾವತ್ತಾಗಿ ಅನುಷ್ಠಾನಕ್ಕೆ ತರಬೇಕು ಎಂದು ಸಲಹೆ ಮಾಡಿದರು.
ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಮಾರಂಭದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು, ಬಿಎಸ್‍ಪಿ ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಪ್ರಧಾನ ಕಾರ್ಯದರ್ಶಿ ವಸಂತ್, ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ದಂಟರಮಕ್ಕಿ ಲೋಕೇಶ್, ಸುರೇಶ್, ರಾಮ್‍ನಿವಾಸ್ ಚೌಧರಿ, ವಿಠಲ್ ಉಪಸ್ಥಿತರಿದ್ದರು.