ಗುಜರಾತ್ : ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 6 ಮಂದಿ ಸೋಂಕಿತರು ಮೃತಪಟ್ಟಿರುವ ಘಟನೆ ಗುಜರಾತಿನ ರಾಜ್ಕೋಟ್ನಲ್ಲಿರುವ ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದ್ದು, ಘಟನೆ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಸೋಂಕಿತರ ಪೈಕಿ 6 ಮಂದಿ ಮೃತಪಟ್ಟಿದ್ದು, ಘಟನೆ ಸಂಭವಿಸುತ್ತಿದ್ದಂತೆ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ಆಸ್ಪತ್ರೆಯಲ್ಲಿದ್ದ ಉಳಿದ ರೋಗಿಗಳನ್ನು ಪಕ್ಕದ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.










