ದೇಶದಲ್ಲಿ ಒಂದೇ ದಿನ 43.082 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 93.09.788ಕ್ಕೆ ಏರಿಕೆ…

145
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 43.082 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93.09.788 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 492 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,35,715 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 93.09.788 ಮಂದಿ ಸೋಂಕಿತರ ಪೈಕಿ ಈವರೆಗೆ 87.18.517 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,55.556 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.