ಶ್ರೀನಗರ : ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತಿಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರನ್ನು ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಹಾಗೂ ಸುಖ್ಖೀರ್ ಸಿಂಗ್ ಎಂದು ಗುರುತಿಸಲಾಗಿದೆ. ಜಮ್ಮು ಕಾಶ್ಮೀರಾದ ರಜೌರಿ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿದ್ದು, ಈ ವೇಳೆ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಲ್ಲಿ ಭಾರತೀಯ ಯೋಧರು ಕೂಡಾ ತಕ್ಕ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










