ಮರಕ್ಕೆ ಡಿಕ್ಕಿ ಹೊಡೆದ ಬಸ್-ಚಾಲಕ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ…

117
firstsuddi

ತಿರುವನಂತಪುರಂ : ಕೆ.ಎಸ್.ಆರ್.ಟಿ.ಸಿ ಬಸ್ ಬೃಹತ್ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಚ್ಚಿಯ ಚಕ್ಕರಪರಂಬು ಬಳಿ ನಡೆದಿದೆ. ಅರುಣ್ ಕುಮಾರ್ ಮೃತ ಚಾಲಕ ಎಂದು ಗುರುತಿಸಲಾಗಿದೆ. ತಿರುವನಂತಪುರಂ ನಿಂದ ಕೋಯಿಕ್ಕೋಡ್ ಕಡೆಗೆ ತೆರಳುತ್ತಿದ್ದ ಬಸ್ ಇಂದು ಮುಂಜಾನೆ ಕೊಚ್ಚಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಮರಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಬಸ್‍ನಲ್ಲಿದ್ದ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.