ತಾಯಿಯೊಂದಿಗೆ ಮಲಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ…

190
firstsuddi

ರಾಜಸ್ಥಾನ : ತಾಯಿಯೊಂದಿಗೆ ಮಲಗಿದ್ದ ಬಾಲಕಿಯನ್ನು ಅಪಹರಿಸಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಪ್ರತಾಪಗಢ ಎಂಬಲ್ಲಿ ನಡೆದಿದೆ. 8 ವರ್ಷದ ಬಾಲಕಿ ಶುಕ್ರವಾರ ರಾತ್ರಿ ತನ್ನ ತಾಯಿಯೊಂದಿಗೆ ಮಲಗಿದ್ದ ವೇಳೆ ಅಪರಿಚಿತರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿಲ್ಲದೇ ಬಾಲಕಿಯ ಕತ್ತನ್ನು ಹಿಸುಕಿ ಕೊಲೆ ಮಾಡಿ ಬಳಿಕ ಬಾಲಕಿಯ ಶವವನ್ನು ನೀರಿಲ್ಲದ ಬಾವಿಗೆ ಬಿಸಾಡಿ ಪರಾರಿಯಾಗಿದ್ದು, ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.