ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದ ಕಾರಿನ ಮೇಲೆ ಮರಳು ಲಾರಿ ಪಲ್ಟಿ : 6 ಮಂದಿ ಸಾವು…

154
firstsuddi

ಉತ್ತರ ಪ್ರದೇಶ : ಕಾರಿನ ಮೇಲೆ ಮರಳು ತುಂಬಿದ್ದ ಟ್ರಕ್ ಉರುಳಿ ಬಿದ್ದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೇವಿಗಂಜ್ ಪಟ್ಟಣದ ಶೆಹಜಾದ್ಪುರ ಗ್ರಾಮದ ಮಹೇಶ್ವರಿ ಅತಿಥಿಗೃಹದ ಬಳಿ ನಡೆದಿದೆ. ಮೃತರು ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಶೆಹಜಾದ್ಪುರದ ಗ್ರಾಮದ ತಮ್ಮ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರಿನ ಮೇಲೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಪರಿಣಾಮ 6 ಮಂದಿ ಸ್ಥಳದಲ್ಲೆ ಮೃತ ಪಟ್ಟಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳಿಯರ ಸಹಾಯದಿಂದ ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಕಡಾಧಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.