ದೇಶದಲ್ಲಿ ಒಂದೇ ದಿನ 35,551 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆ…

203
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 35,551 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 526 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,38,648ಕ್ಕೆ ಏರಿಕೆಯಾಗಿದೆ. ದೇಶದಲಿ 95,34,965ಮಂದಿ ಸೋಂಕಿತರ ಪೈಕಿ ಈವರೆಗೆ 89,73,373ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,22,943 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.