ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ- ಇಬ್ಬರು ಯುವಕರು ಸ್ಥಳದಲ್ಲೇ ಸಾವು…

206
firstsuddi

ಶಿವಮೊಗ್ಗ : ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರವಾತಿ ತಾಲ್ಲೂಕಿನ ಸಿದ್ದಾಪುರದ ಬಳಿ ನಡೆದಿದೆ. ಮೃತ ಯುವಕರನ್ನು ರಾಜೇಶ್(19) ಹಾಗೂ ತರುಣ್(19) ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ 8 ಮಂದಿ ಯುವಕರು ಗೋವಾಕ್ಕೆ ಪ್ರವಾಸ ತೆರಳಿದ್ದು, ಗೋವಾದಿಂದ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.