ಮಂಗಳೂರು : ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣ-ಮತ್ತಿಬ್ಬರು ಆರೋಪಿಗಳ ಬಂಧನ…

117
firstsuddi

ಮಂಗಳೂರು : ಅಪಾರ್ಟ್‍ಮೆಂಟ್ ಕಾಂಪೌಂಡ್ ಮೇಲೆ ಉಗ್ರ ಸಂಘಟನೆ ಪರ ಗೋಡೆ ಬರಹ ಬರೆದ ಪ್ರಕರಣದಲ್ಲಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದು, ಈ ಮೂಲಕ ಈ ಪ್ರಕರಣದಲ್ಲಿ ಮೂವರ ಬಂಧನವಾಗಿದೆ. ಕಳೆದ ನ.27 ರಂದು ಮಂಗಳೂರಿನ ಬಿಜೈ ಹಾಗೂ ಕೋರ್ಟ್ ರಸ್ತೆಯಲ್ಲಿ ಉಗ್ರ ಸಂಘಟನೆ ಪರ ಗೋಡೆ ಬರಹ ಬರೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.30ರಂದು ತೀರ್ಥಹಳ್ಳಿಯ ನಿವಾಸಿ ನಜೀರ್ ಅಹಮ್ಮದ್ ಎಂಬಾತನನ್ನು ಬಂಧಿಸಲಾಗಿತ್ತು. ಆತನ ಮಾಹಿತಿಯಂತೆ ಪೊಲೀಸರು ಬೆಂಗಳೂರು ಹಾಗೂ ತೀರ್ಥಹಳ್ಳಿಯಿಂದ ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.