ವಿಜಯಪುರ : ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಲಾಗಿದ್ದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ಅರವಿಂದ ಅವರು ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದಿವ್ಯಾ ಅವರು ವಿಜಯಪುರದ ಸೆಷನ್ಸ್ ಕೋರ್ಟ್‍ನಲ್ಲಿ ಹಿರಿಯ ವಕೀಲರಾಗಿರುವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿದ್ದು, ಇವರು ನವೆಂಬರ್ 20.ರಂದು ಏಮ್ಸ್ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯನ್ನು ಬರೆದು ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ಶೇ.67.08 ಅಂಕಗಳನ್ನು ಪಡೆಯುವ ಮೂಲಕ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಮೂಲಕ ರಾಷ್ಟ್ರ ಮಟ್ಟದಲ್ಲಿ ವಿಜಯಪುರದ ಕೀರ್ತಿಯನ್ನು ಬೆಳಗಿಸಿದ್ದಾರೆ.










