ದೇಶದಲಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆ-26,567 ಸೋಂಕಿತರು ಪತ್ತೆ…

117
firstsuddi

ನವದೆಹಲಿ : ದೇಶದಲ್ಲಿ ಸೋಂಕಿತರ ಪ್ರಮಾಣದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 26,567 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,03,770ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 385 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,40,958 ಕ್ಕೆ ಏರಿಕೆಯಾಗಿದೆ. ದೇಶದಲಿ 97,03,770 ಮಂದಿ ಸೋಂಕಿತರ ಪೈಕಿ ಈವರೆಗೆ 91,78,946 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,83,866 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.