ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗೃಹಬಂಧನ…

121
firstsuddi

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗೃಹಬಂದನ ವಿಧಿಸಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ ಎರಡು ವಾರಗಳಿಂದ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣ ಮೂಲದ ರೈತರು “ದೆಹಲಿ ಚಲೋ” ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಯಲ್ಲಿ ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆ, ಅರವಿಂದ್ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ.