ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಸಂತ್ರಸ್ತೆ ಬಾಲಕಿಯ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಪಕ್ಕದ ಮನೆಯ ಬಾಲಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ ತನ್ನ ಪೋಷಕರು ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಂತೆ ಬಾಲಕನ ಈ ಕೃತ್ಯವನ್ನು ತಿಳಿಸಿದ್ದಾರೆ. ಬಳಿಕ ಕೂಡಲೇ ಬಾಲಕಿಯ ಪೋಷಕರು ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು,ಸೆಕ್ಷನ್ 376 ಎಬಿ, 376/2/ಎನ್ ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರ ಬಾಲಕನನ್ನು ಬಾಲ ಮಂದಿರದಲ್ಲಿ ಇರಿಸಿದ್ದಾರೆ.










