ಚಿಕ್ಕಮಗಳೂರು : ಸಹಿಪ್ರಾ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಎಸ್.ಈ.ಲೋಕೇಶ್ವರಾಚಾರ್ ಅವಿರೋಧ ಆಯ್ಕೆ…

213
firstsuddi

ಚಿಕ್ಕಮಗಳೂರು : ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಎಸ್.ಈ.ಲೋಕೇಶ್ವರಾಚಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯಾಧ್ಯಕ್ಷ ರವೀಂದ್ರ ಸೂರಿ ಭಟ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಲೋಕೇಶ್ವರಾಚಾರ್ ಭಾರತ ಸೇವಾದಳದ ತಾಲ್ಲೂಕು ಸಂಘಟಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.