ಆಂಧ್ರ ಪ್ರದೇಶ : ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೃಷ್ಣ ಜಿಲ್ಲೆಯ ತಕ್ಕೆಲ್ಲಪಡು ಗ್ರಾಮದ ಬಳಿ ನಡೆದಿದೆ. ಮೃತರನ್ನು ಮಧಿರಾ, ಖಮ್ಮಂ ನಿವಾಸಿಗಳಾದ ಮಚಾರ್ಲ್ ಶ್ಯಾಮ್, ಶಾರದಾ ಹಾಗೂ ಶ್ಯಾಮಲಾ ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಒಟ್ಟು 9 ಮಂದಿ ವೇಮುಲವಾಡ ದೇವಾಲಯದಿಂದ ವಾಪಸ್ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










