ಮೂಡಿಗೆರೆ : ನೂತನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಭಾರತಿ ರವೀಂದ್ರ ಅವರು ಆಯ್ಕೆಯಾಗಿದ್ದಾರೆ. ಇಂದು ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಭಾರತೀ ರವೀಂದ್ರ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ತಾ.ಪಂ ಅಧ್ಯಕ್ಷ ರತನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅನುಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜೀತ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜನ್ನಾಪುರ ರಘು, ದಿವಾಕರ್ ಗೌಡಹಳ್ಳಿ, ಬಿಜೆಪಿ ಯುವ ಮುಖಂಡರಾದ ಪ್ರಶಾಂತ್ ಬಿಳಗುಳ, ಪ್ರವೀಣ್ ಪೂಜಾರಿ, ಹೆಗ್ಗರವಳ್ಳಿ ಮಧು ಸೇರಿದಂತೆ ಇತರರು ಉಪಸ್ಥಿತರಿದ್ದರು. ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಡಾ. ನಾಗರಾಜ್ ಅವರು ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು.










