ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 29,398 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,96,770 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 414 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,42,186ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 97,96,770 ಮಂದಿ ಸೋಂಕಿತರ ಪೈಕಿ ಈವರೆಗೆ 92,90,834 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,63,749 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










