ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ನಟಿ ಸಂಜನಾ ಗಲ್ರಾನಿ ಅವರು ತನಗೆ ಆರೋಗ್ಯದ ಸಮಸ್ಯೆ ಇದೆ ಜಾಮೀನು ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹರೀಶ್ ಕುಮಾರ್ ನೇತೃತ್ವದ ಪೀಠ ಸಂಜನಾ ಗಲ್ರಾನಿ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿತ್ತು. ಇಂದು ಅದರಂತೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ವೈದ್ಯಕೀಯ ವರದಿಯನ್ನು ಆಧರಿಸಿ ನ್ಯಾಯಾಲಯ ಸಂಜನಾ ಗಲ್ರಾನಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.










