ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಹೊಸೂರ(30) ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










