ಕೊರೊನಾ ಭೀತಿ-ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಹೆಚ್‍ಡಿಕೆ ನಿರ್ಧಾರ…

146
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಭೀತಿ ಇರುವುದರಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಸ್ವತಃ ಹೆಚ್.ಡಿ. ಕುಮಾರಸ್ವಾಮಿ ಅವರೇ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. “ ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು. ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ” ಎಂದು ಬರೆದುಕೊಂಡಿದ್ದಾರೆ.