ಮಂಗಳೂರು : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಳೆಯಂಗಡಿಯ ಕಲ್ಲಾಪು ಬಳಿ ನಡೆದಿದೆ. ವಿನೋದ್ ಸಾಲ್ಯಾನ್ (38), ರಚನಾ (38. ಸಾಧ್ಯ 10) ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ. ಕೆಲವು ವರ್ಷಗಳಿಂದ ಮುಂಬೈನಲ್ಲಿ ವಾಸವಾಗಿದ್ದ ವಿನೋದ್ ಅವರು ಒಂದು ವರ್ಷದಿಂದ ಹಳೆಯಂಗಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವಿನೋದ್ ಸಾಲ್ಯಾನ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು. ಕೊರೊನಾ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ತಿಳಿದು ಬಂದಿದ್ದು, ಈ ಹಿನ್ನೆಲೆ ಊಟದಲ್ಲಿ ವಿಷ ಬೆರೆಸಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಎರಡು ದಿನ ಕಳೆದರೂ ಮನೆಯಿಂದ ಯಾರೂ ಹೊರಬಾರದೆ ಇದ್ದಾಗ ಸ್ಥಳಿಯರು ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










