ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 22,065ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 99,06,165ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 354 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,43,709ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 99,06,165 ಮಂದಿ ಸೋಂಕಿತರ ಪೈಕಿ ಈವರೆಗೆ 94,22,636 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,39,820 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










