ದೇಶದಲ್ಲಿ 26,382 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 99,32,548ಕ್ಕೆ ಏರಿಕೆ…

133
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 26,382ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 99,32,548ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 387 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,44,096ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 99,32,548ಮಂದಿ ಸೋಂಕಿತರ ಪೈಕಿ ಈವರೆಗೆ 94,22,636ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,32,002ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.