ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ…

140
firstsuddi

ಮಂಗಳೂರು :ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ತಾಲ್ಲೂಕಿನ ಅಡ್ಡೂರಿನಲ್ಲಿ ನಡೆದಿದೆ. ಮುಹಮ್ಮದ್ ತಾಜುದ್ದೀನ್ (30) ಹಲ್ಲೆಗೆ ಒಳಗಾಗಿರುವ ಯುವಕ ಎಂದು ಗುರುತಿಸಲಾಗಿದೆ. ರಾತ್ರಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಮುಹಮ್ಮದ್ ತಾಜುದ್ದೀನ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಜಿಲ್ಲೆಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.