ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಹೃದಯಾಘಾತದಿಂದ ನಿಧನ…

140
firstsuddi

ಚಿಕ್ಕಬಳ್ಳಾಪುರ : ಮಾಜಿ ಸಚಿವೆ ರೇಣುಕಾ ರಾಜೇಂದ್ರನ್(72) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರೇಣುಕಾ ಅವರು ಹೃದ್ರೋಗ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 1972 ಹಾಗೂ 1978ರಲ್ಲಿ ಚಿಕ್ಕಬಳ್ಳಾಪುರ ಮೀಸಲು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಹಾಗೂ ರಾಜೇಂದ್ರನ್ ಗುಂಡೂರಾಯರ ಸರ್ಕಾರದಲ್ಲಿ ಯುವಜನ ಸೇವೆ ಮತ್ತು ರೇಷ್ಮೆ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮಾಜಿ ಸಚಿವೆ ರೇಣುಕಾ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಸಚಿವ ಬಿ. ಶ್ರೀರಾಮುಲು ಅವರು ಟ್ವೀಟ್ ಮಾಡಿ, ಚಿಕ್ಕಬಳ್ಳಾಪುರ ಮಾಜಿ ಶಾಸಕಿ, ರೇಷ್ಮೆ, ಕ್ರೀಡೆ, ಯುವಜನ ಸೇವೆ ಖಾತೆ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ನಾಯಕಿ, ಮಾಜಿ ಸಚಿವೆ ಶ್ರೀಮತಿ ರೇಣುಕಾ ರಾಜೇಂದ್ರನ್ ಅವರ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ದೇವರಾಜು ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯಿಂದ ರಾಜಕೀಯ ಪ್ರವೇಶಿಸಿದ ಶ್ರೀಮತಿ ರೇಣುಕಾ ಅವರು ಮೂರು ಬಾರಿ ಶಾಸಕರಾಗಿ, ಶ್ರೀ ಗುಂಡೂರಾವ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ಆಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.