ಕಳಸ : ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮವನ್ನು ಮಕ್ಕಳ ತಜ್ಞೆ ಡಾ.ಕಾವ್ಯ ಉದ್ಘಾಟಿಸಿದರು. ಕ್ಷಯ ರೋಗದ ಲಕ್ಷಣಗಳು ಬಂದಲ್ಲಿ ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಬೇಕು. ಹಾಗಾದರೆ ಮಾತ್ರ ಕ್ಷಯ ರೋಗದಿಂದ ಮುಕ್ತಿಹೊಂದಲು ಸಾಧ್ಯ. 2025ರ ವೇಳೆಗೆ ಕ್ಷಯಮುಕ್ತ ಭಾರತ ನಿರ್ಮಾಣದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಅದಕ್ಕಾಗಿ ಸಾರ್ವಜನಿಕರ ಸಹಕಾರ ಅಗತ್ಯ. ಕಾರ್ಯಕ್ರಮದಲ್ಲಿ ಕಚೇರಿ ಅಧೀಕ್ಷಕರು, ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು ಇದ್ದರು.










