ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಮಡಿದ್ದು, ಕಳೆದ 24 ಗಂಟೆಯಲ್ಲಿ 19,556 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,00,75,116ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 301 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,46,111 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,00,75,116 ಮಂದಿ ಸೋಂಕಿತರ ಪೈಕಿ ಈವರೆಗೆ 96,36,487 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,92,518 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










