ದೇಶದಲ್ಲಿ 23,950 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,00,99,066ಕ್ಕೆ ಏರಿಕೆ…

106
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 23,950 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,00,99,066ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 333 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,46,444ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,00,99,066 ಮಂದಿ ಸೋಂಕಿತರ ಪೈಕಿ ಈವರೆಗೆ 96,63,382 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,89,240 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.