ಚಿಕ್ಕಮಗಳೂರು : ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ ಕಾರಜೋಳ ಅವರು ನಾಳೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಮಧ್ಯಾಹ್ನ 2.00 ಗಂಟೆಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 2.30ಕ್ಕೆ ಜಿಲ್ಲಾಡಳಿತ ವತಿಯಿಂದ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಯೋಜನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಸಂಜೆ 4.00 ಗಂಟೆಗೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










