ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ವರ್ಷದ ಜನ್ಮದಿನ-ಮೋದಿ ಸೇರಿದಂತೆ ಗಣ್ಯರಿಂದ ಗೌರವ…

114
firstsuddi

ನವದೆಹಲಿ : ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ವರ್ಷದ ಜನ್ಮ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೇರಿದಂತೆ ಹಲವು ಗಣ್ಯರು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ಸದೈವ್ ಅಟಲ್ ಬಳಿ ತೆರಳಿ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಷ್ ಗೋಯಲ್ ಅವರು ಸೇರಿದಂತೆ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು.