ಬೆಂಗಳೂರು : ಈಗಾಗಲೇ ನಿಗದಿಯಾಗಿರುವಂತೆ ಜ.1 ರಿಂದ ಶಾಲೆ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಶಾಲಾ ಕಾಲೇಜು ಆರಂಭಿಸುವ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು, ಶಾಲಾ ಕಾಲೇಜು ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈಗಾಗಲೇ ನಿಗದಿಯಾಗಿರುವಂತೆ ಜ. 1ರಿಂದ 10 ಹಾಗೂ 12ನೇ ತರಗತಿಗಳನ್ನು ಮುಂಜಾಗೃತ ಕ್ರಮಗಳೊಂದಿಗೆ ಆರಂಭ ಮಾಡಲು ತಜ್ಞರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.










