ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಕಾರು-ಇಬ್ಬರು ಸಾವು…

107
firstsuddi

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಸವನಕಟ್ಟೆ ಗ್ರಾಮದ ಬಳಿ ನಡೆದಿದೆ. ಸಿದ್ದನಗೌಡ ಬಿಷ್ಟನಗೌಡರ (45), ಪ್ರಕಾಶ್ ಬನ್ನಿಮಟ್ಟಿ(40) ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ. ಮೃತರು ತಾಲ್ಲೂಕಿನ ನೆಗಳೂರು ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಮೃತರು ಇಂದು ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆಯ ಹಿನ್ನೆಲೆ, ಮತ ಎಣಿಕೆಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.